ಕನ್ನಡಪರ ಸಂಘಟನೆಗಳಿಂದ ಡಿಸೆಂಬರ್ 31 ಕ್ಕೆ `ಕರ್ನಾಟಕ ಬಂದ್' ಘೋಷಣೆ

ಕನ್ನಡಪರ ಸಂಘಟನೆಗಳಿಂದ ಡಿಸೆಂಬರ್ 31 ಕ್ಕೆ `ಕರ್ನಾಟಕ ಬಂದ್' ಘೋಷಣೆ

ಬೆಂಗಳುರು : ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡಲಾಗುವುದು.

ಡಿಸೆಂಬರ್ 31 ರ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ.

ಬೆಳಗಾವಿಯ ರಾಜಕಾರಣಿಗಳು ಸಂಪೂರ್ಣ ಮರಾಠಿ ಏಜೆಂಟ್ ರಂತೆ ನಡೆದುಕೊಳ್ಳುತ್ತಿದ್ದಾರೆ. ಎಂಇಎಸ್ ಕಾರ್ಯಕರ್ತನ ಮುಖಕ್ಕೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರನ್ನು ಜೈಲಿಗೆ ಹಾಕಿದ್ದಾರೆ. ಇನ್ನೂ ಅವರನ್ನು ಬಿಡುಗಡೆ ಮಾಡಿಲ್ಲ. ಕರ್ನಾಟಕದ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ. ಇದು ಕನ್ನಡಿಗರ ಮೇಲೆ, ಕನ್ನಡ ಭಾಷೆ ಮೇಲೆ ಬೆಂಕಿ ಇಟ್ಟಹಾಗೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಎಂಇಎಸ್ ನಿಷೇಧ ಮಾಡಲೇಬೇಕು. ಡಿಸೆಂಬರ್ 31 ರಂದು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಸಮಗ್ರ ಕರ್ನಾಟಕದ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.