ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಧಾರವಾಡದಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ಪ್ರತಿಭಟನೆ

ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಧಾರವಾಡದಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ಪ್ರತಿಭಟನೆ

ಮಂಗಳವಾರದಂದು ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರು ಮತಾಂಧರಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದು, ಈ ಘಟನೆ ದೇಶವಾಸಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪೈಶಾಚಿಕ ಕೃತ್ಯವನ್ನು ಖಂಡಿಸಿ ದೇಶದೆಲ್ಲೆಡೆ ಇಂದು ವ್ಯಾಪಕ ಪ್ರತಿಭಟನೆ ನಡೆಸಲಾಗುತ್ತಿದೆ.

ಜಾತಿ - ಮತ - ಪಕ್ಷ ಮರೆತು ಎಲ್ಲರೂ ಈ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸುತ್ತಿದ್ದು, ಆರೋಪಿಗಳಿಗೆ ಈ ಕೂಡಲೇ ಗಲ್ಲಿಗೇರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಘಟನೆ ನಡೆದ ಉದಯಪುರದಲ್ಲಿ ಇಂದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದು, ಲಕ್ಷಾಂತರ ಮಂದಿ ಸೇರಿದ್ದಾರೆ.

ಕರ್ನಾಟಕದಲ್ಲೂ ಸಹ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದ್ದು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂಬ ಆಗ್ರಹ ಕೇಳಿ ಬಂದಿದೆ. ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ಪ್ರತಿಭಟನೆ ನಡೆಸಲಾಗಿದ್ದು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.