ಕಬ್ಬಿಗೆ ಸೂಕ್ತ ಬೆಲೆ ಆಗ್ರಹಿಸಿ ರೈತರ ಪ್ರತಿಭಟನೆ : ಇಂದಿನಿಂದ ನ.19 ರವರೆಗೆ ಬಾಗಲಕೋಟೆ ಜಿಲ್ಲೆಯಾದ್ಯಂತ 'ನಿಷೇಧಾಜ್ಞೆ' ಜಾರಿ
ಬಾಗಲಕೋಟೆ : ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ.
ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟೆ ಜಿಲ್ಲಾದ್ಯಂತ ಇಂದಿನಿಂದ ನವೆಂಬರ್ 19 ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆ ಇಂದು ಮುಧೋಳ ನಗರ ಬಂದ್ ಗೆ ಕೂಡ ಕರೆ ನೀಡಲಾಗಿತ್ತು.
ಮುಧೋಳ ನಗರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ.ಬಸ್ ಸಂಚಾರ ಸ್ಥಗಿತಗೊಂಡಿದೆ. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.