ಆರೆಸ್ಸೆಸ್ ವೇಷ ಧರಿಸಿ ಪೋಸ್ ಕೊಟ್ಟ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು

ಕಲಬುರ್ಗಿ: ಆಳಂದ ತಾ|ನ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಮೂವರು ಪ್ರಾಧ್ಯಾಪಕರು ಆರೆಸ್ಸೆಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಪೋಸ್ ಕೊಟ್ಟಿದ್ದಾರೆ. ಇದೀಗ ಈ ಫೋಟೋ ವೈರಲ್ ಆಗಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದೆ. ಸಹಾಯಕ ಪ್ರಾಧ್ಯಾಪಕ ಸಾರ್ವಜನಿಕ ಆಡಳಿತ ವಿಭಾಗದ ಡಾ.ಅಲೋಕ್ ಕುಮಾರ್ ಗೌರವವವ, ಮನಃಶಾಸ್ತ್ರ ವಿಭಾಗದ ಡಾ.ವಿಜಯೇಂದ್ರ ಪಾಂಡೆ & ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು RSS ವೇಷಧಾರಿ ವಿದ್ಯಾರ್ಥಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ