ಕರ್ನಾಟಕ ಗಡಿ ಹಾಗೂ ನದಿ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಶಿವರಾಜ್ ಪಾಟೀಲ್ ನೇಮಕ

ಕರ್ನಾಟಕ ಗಡಿ ಹಾಗೂ ನದಿ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಶಿವರಾಜ್ ಪಾಟೀಲ್ ನೇಮಕ

ಬೆಂಗಳೂರು: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರನ್ನು ಕರ್ನಾಟಕ ಗಡಿ ಹಾಗೂ ನದಿ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ‌ ಮಾಡಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದ ಭುಗಿಲೆದ್ದಿರುವ ಸಂದರ್ಭದಲ್ಲೇ ಸರ್ಕಾರದ ಈ ತೀರ್ಮಾನ ಮಹತ್ವ ಪಡೆದುಕೊಂಡಿದೆ.

ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾಗಿರುವ ಶಿವರಾಜ್ ಪಾಟೀಲ್ ಅವರು, ಕರ್ನಾಟಕ ಮುಖ್ಯ ಲೋಕಾಯಕ್ತ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು.

ಮೂಲತಃ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಅರಕರೆ ಗ್ರಾಮದವರಾದಅವರು,ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾಗಿದ್ದ ವೇಳೆ ಕೆಲವು ಮಹತ್ವದ ತೀರ್ಪುಗಳನ್ನು ನೀಡಿ ಗಮನ ಸೆಳೆದಿದ್ದರು.