ಡ ಡಿಸೆಂಬರ್ 31 ಕ್ಕೆ `ಕರ್ನಾಟಕ ಬಂದ್' : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ
ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31 ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಬಂದ್ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ನಡೆಯಲಿದೆ.
ಏನಿರಲಿದೆ?
ಡಿಸೆಂಬರ್ 31 ರಂದು ಆಸ್ಪತ್ರೆ, ಪೆಟ್ರೋಲ್ ಬಂಕ್, ಬ್ಯಾಂಕ್, ಸಾರಿಗೆ, ಮೆಡಿಕಲ್ ಸೇವೆ ಇರಲಿದೆ.
ಏನಿರಲ್ಲ?
ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದೆ. ಈ ನಿಟ್ಟಿಯಲ್ಲಿ ಯವುದೇ ವಾಹನ ಸಂಚಾರ ನಡೆಸಲು ಅವಕಾಶ ವಿರಲ್ಲ. ಹೀಗಾಗಿ ಆಟೋ, ಟ್ಯಾಕ್ಸಿ ಸಂಚಾರ, ಬೀದಿ ಬದಿ ಅಂಗಡಿ, ಮದ್ಯ ಮಾರಾಟ, ಹೋಟೆಲ್ ಸೇರಿದಂತೆ ಇತರ ಅಂಗಡಿ ಮುಂಗಟ್ಟುಗಳು ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.