ಕರ್ನಾಟಕ ವಿಧಾನಸಭೆ ಚುನಾವಣೆ : ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತದಾನಕ್ಕೆ ಅವಕಾಶ

ಕರ್ನಾಟಕ ವಿಧಾನಸಭೆ ಚುನಾವಣೆ : ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತದಾನಕ್ಕೆ ಅವಕಾಶ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಿದೇ ಮೊದಲ ಬಾರಿಗೆ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.

ವಿಧಾನಸಭೆ ಚುನಾವಣೆಯಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಾಡಿದ ಮನವಿಯನ್ನು ಪುರಷ್ಕರಿಸಿರುವ ಚುನಾವಣಾ ಆಯೋಗ ಅಂಚೆ ಮತದಾನಕ್ಕೆ ಅವಕಾಶ ನೀಡಿದೆ.

ಈ ಮೂಲಕ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರು ಮತದಾನದಿಂದ ವಂಚಿತರಾಗುವುದು ತಪ್ಪಿದಂತಾಗಿದೆ ಎಂದು ಕೆಯುಡಬ್ಲ್ಯೂ ಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ಮೇ. 10 ಮತದಾನ ನಡೆಯಲಿದ್ದು, ಮೇ. 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.