ಕರ್ನಾಟಕ ವಿಧಾನಸಭೆ ಚುನಾವಣೆ-2023 : ಇಂದು ಜೆಡಿಎಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ
ಬೆಂಗಳೂರು : ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್ ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರಿನಲ್ಲಿ 2 ನೇ ಪಟ್ಟಿ ಬಿಡುಗಡೆ ಮಾಡಲಿದೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.
ಸೋಮವಾರ ಜೆಡಿಎಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ, 2 ನೇ ಪಟ್ಟಿಯಲ್ಲೇ ಹಾಸನ್ ಟಿಕೆಟ್ ಘೋಷಣೆಯಾಗಲಿದೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.