ಕರ್ನಾಟಕ ವಿಧಾನಸಭೆ ಚುನಾವಣೆ : ರಾಜ್ಯದಲ್ಲಿ ಪ್ರಧಾನಿ ಮೋದಿ 20 ರ‍್ಯಾಲಿ

ಕರ್ನಾಟಕ ವಿಧಾನಸಭೆ ಚುನಾವಣೆ : ರಾಜ್ಯದಲ್ಲಿ ಪ್ರಧಾನಿ ಮೋದಿ 20 ರ‍್ಯಾಲಿ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ಗೆಲ್ಲಲು ಬಿಜೆಪಿ ಭರ್ಜರಿ ಪ್ಲಾನ್ ನಡೆಸಿದ್ದು, ರಾಜ್ಯದಲ್ಲಿ ಒಟ್ಟು 20 ಕ್ಕೂ ಹೆಚ್ಚು ರ್ಯಾಲಿಗಳಿಗೆ ಪ್ರಧಾನಿ ಮೋದಿ ಅವರನ್ನು ಕರೆಸಲು ಯೋಜನೆ ರೂಪಿಸಿದೆ.

ಕಳೆದ ತಿಂಗಳಲ್ಲಿ ಸರ್ಕಾರದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಳಿಗೆ 7 ಬಾರಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಚುನಾವಣೆ ಹತ್ತಿರ ಬಂದಂತೆ 20 ಬಾರಿ ಕರೆ ತರಲು ಬಿಜೆಪಿ ನಿರ್ಧರಿಸಿದೆ. ಮೋದಿ ಹೆಚ್ಚಿಚ್ಚು ಬಾರಿ ರಾಜ್ಯಕ್ಕೆ ಬಂದಷ್ಟು ಮತಗಳಿಗೆ ಪ್ರಮಾಣ ಹೆಚ್ಚಾಗುತ್ತದೆ ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ.

ರಾಜ್ಯದ 6 ವಿಭಾಗಗಳ ಪೈಕಿ ಪ್ರತಿಯೊಂದರಲ್ಲೂ ಮೋದಿ ನೇತೃತ್ವದ ಕನಿಷ್ಟ 3 ರ್ಯಾಲಿಗಳನ್ನು ಆಯೋಜಿಸಲು ಯೋಜಿಸಲಾಗಿದೆ. ಜೊತೆಗೆ 40 ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಾದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ರ್ಯಾಲಿ ಆಯೋಜನೆಗೆ ಉದ್ಧೇಶಿಸಲಾಗಿದೆ ಎನ್ನಲಾಗಿದೆ.

ಇನ್ನು ಬಹಿರಂಗ ಪ್ರಚಾರಕ್ಕೆ ಅಂತ್ಯಕ್ಕೆ ಮೊದಲಿನ ಮೂರು ದಿನಗಳನ್ನು ಪ್ರಧಾನಿ ಮೋದಿ ಕರ್ನಾಟಕದಲ್ಲೇ ಕಳೆಯಬಹುದು ಮೇ. 6-8 ರಂದು ಮೋದಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಬಲವಾಗಿರುವ ವಲಯ ಅಥವಾ ಕ್ಷೇತ್ರಗಳಲ್ಲಿ ಪ್ರಮುಖವಾಗಿ ಪ್ರಚಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.