ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮುನ್ನವೇ ದೇಗುಲ ಮಾಹಾದ್ವಾರ ಉದ್ಘಾಟಿಸಿದ ಸಿ.ಸಿ ಪಾಟೀಲ್
ಗದಗ: ಕೇಂದ್ರ ಚುನಾವಣಾ ಆಯೋಗವು ಇಂದು ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಕೆಲವೇ ಕ್ಷಣಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.
ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ.
ಇನ್ನು ಸಿದ್ದರಾಮಯ್ಯಗೂ ಕೂಡ ನೀತಿ ಸಂಹಿತೆ ಜಾರಿ ಬಿಸಿ ತಟ್ಟಲಿದೆ. ಇಂದು ಮಧ್ಯಾಹ್ನ ಒಂದು ಗಂಟೆಗೆ ವರುಣಾ ಕ್ಷೇತ್ರಕ್ಕೆ ಸಿದ್ದಾರಾಮಯ್ಯ ಆಗಮಿಸುತ್ತಿದ್ದಾರೆ. ಈ ವೇಳೆ ವರುಣಾ ಕ್ಷೇತ್ರದ ಬಿಳಿಗುಲಿಯಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಮೈಸೂರು ಜಿಲ್ಲೆ ವರುಣಾ ಕ್ಷೇತ್ರ ವ್ಯಾಪ್ತಿಯ ಬಿಳಿಗಲಿಯಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಆದರೆ ಇದೀಗ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದ್ರೆ ಉದ್ಧಾಟನೆ ಕಾರ್ಯಕ್ರಮ ರದ್ದು ಆಗುವ ಸಾಧ್ಯತೆ ಇದೆ. ಹೀಗಾಗಿ ಉದ್ಘಾಟನೆ ಬದಲಿಗೆ ಪಕ್ಷದ ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಲಾಗಿದೆ. ಇಂದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರದ ಅಖಾಡಕ್ಕಿಳಿಯಲಿದ್ದಾರೆ.
ಇತ್ತ, ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ರದ್ದು ಮಾಡಿದ್ದಾರೆ.