ಕರ್ನಾಟಕ ಹೈಕೋರ್ಟ್ ಗೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ|

ಕರ್ನಾಟಕ ಹೈಕೋರ್ಟ್ ಗೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ|

ಬೆಂಗಳೂರು : ಕರ್ನಾಟಕ ರಾಜ್ಯ ಹೈಕೋರ್ಟ್'ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗೂ ವೆಂಕಟೇಶ್ ನಾಯಕ್ ತಾವರನಾಯಕ್ ನೇಮಕ ಮಾಡಲಾಗಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ, 2 ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ಹೈಕೋರ್ಟ್'ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗೂ ವೆಂಕಟೇಶ್ ನಾಯಕ್ ತಾವರನಾಯಕ್ ನೇಮಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂಕೋರ್ಟ್ ಕೊಲಿಜಿಯಂ, ವಿವಿಧ ಹೈಕೋರ್ಟ್‌ಗಳಿಗೆ ಏಳು ಮಂದಿ ನ್ಯಾಯಾಂಗ ಇಲಾಖಾ ಅಧಿಕಾರಿಗಳ ಪದೋನ್ನತಿಗೆ ಹಾಗೂ ಇಬ್ಬರು ವಕೀಲರಿಗೆ ನ್ಯಾಯಮೂರ್ತಿಗಳನ್ನಾಗಿ ಬಡ್ತಿ ನೀಡಲು ಶಿಫಾರಸು ಮಾಡಿತ್ತು. ಜಿಲ್ಲಾ ನ್ಯಾಯಾಧೀಶರಾದ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ತವರನಾಯ್ಕ್ ಅವರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ಪದೋನ್ನತಿಗೊಳಿಸುವ ಪ್ರಸ್ತಾವಕ್ಕೆ ಕೊಲಿಜಿಯಂ ಸಭೆಯಲ್ಲಿ ಅಂಗೀಕಾರವಾಗಿತ್ತು.