ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಆರ್ಭಟ

ಬೆಂಗಳೂರು: ಮ್ಯಾಂಡಸ್ ಚಂಡಮಾರುತದಿಂದ ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ & ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು & ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಮ್ಯಾಂಡಸ್ ಚಂಡಮಾರುತದಿಂದಾಗಿ ಡಿ.13ರವರೆಗೂ ರಾಜ್ಯದಲ್ಲಿ ಮಳೆ ಆರ್ಭಟಿಸಲಿದ್ದು, ಇಂದು ಕರ್ನಾಟಕದ 15 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.