ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ 3 ದಿನ ಮಳೆ ಆರ್ಭಟ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ 3 ದಿನ ಮಳೆ ಆರ್ಭಟ

ಬೆಂಗಳೂರಿನಲ್ಲಿ ಇಂದಿನಿಂದ (ನ.22) 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಇಂದಿನಿಂದ ರಾಜ್ಯ ರಾಜಧಾನಿಯಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ನ.24ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.