ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್
ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.
ಒಟ್ಟು 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗುವುದು, ಒದೊಂದು ಮತಗಟ್ಟೆಗೆ 883 ಮತದಾರರು. ನಗರ ಪ್ರದೇಶಧಲ್ಲಿ 24,063 ಮತಗಟ್ಟೆಗಳ ಸ್ಥಾಪನೆ, ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳ ಸ್ಥಾಪನೆ 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆಗಳ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಅವಕಾಶ ನೀಡಲಾಗಿದೆ ಎಂದರು.