ಕರ್ನಾಟಕದಲ್ಲಿ 'ಪರಿಸರ ಸ್ನೇಹಿ' ಪಟಾಕಿಗೆ ಮಾತ್ರ ಅವಕಾಶ : 'ಮಾಲಿನ್ಯ ನಿಯಂತ್ರಣ ಮಂಡಳಿ'ಯಿಂದ ಖಡಕ್ ಸೂಚನೆ

ಕರ್ನಾಟಕದಲ್ಲಿ 'ಪರಿಸರ ಸ್ನೇಹಿ' ಪಟಾಕಿಗೆ ಮಾತ್ರ ಅವಕಾಶ : 'ಮಾಲಿನ್ಯ ನಿಯಂತ್ರಣ ಮಂಡಳಿ'ಯಿಂದ ಖಡಕ್ ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ 'ಪರಿಸರ ಸ್ನೇಹಿ' ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ, ಒಂದು ವೇಳೆ ಕಂಡು ಬಂದರೆ ಮುಲಾಜಿ‍ಲ್ಲದೇ ಕ್ರಮ ಕೈಗೊಳ್ಳಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಖಡಕ್ ಸೂಚನೆ ನೀಡಿದೆ.

ಒಂದು ವೇಳೆಹಸಿರು ಪಟಾಕಿ ಹೊರೆತು ಪಡಿಸಿ ಬೇರೆ ಪಟಾಕಿ ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿ, ಅಗ್ನಿ ಶಾಮಕ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.

ಪಟಾಕಿಯಿಂದಾಗುವ ತ್ಯಾಜ್ಯವನ್ನ ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಪಟಾಕಿಗಳಿಂದಾಗುವ ಹಾನಿಯನ್ನ ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಿದ್ದು, ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ. ಪಟಾಕಿ ಸ್ಟಾಲ್​​ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಯಗೂ ಸೂಚನೆ ನೀಡಲಾಗಿದೆ.

ಇನ್ನೂ. ಒಂದು ಹೆಜ್ಜೆ ಮುಂದೆ ಹೋಗಿ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಟಾಕಿ ಹೊಡೆಯಲು ಅವಕಾಶ. ಪರಿಸರ ಸ್ನೇಹಿ ಪಟಾಕಿಗಳನ್ನ ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ‌ ಮೂಡಿಸಬೇಕು. ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ಬೆಂಗಳೂರು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೇಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನ ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ.

ಹಸಿರು ಪಟಾಕಿ ಎಂದರೇನು..?

ಹಸಿರು ಪಟಾಕಿಗಳು ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯ (NEERI) ಆವಿಷ್ಕಾರವಾಗಿದೆ ಮತ್ತು ಅವು ಶಬ್ದದಿಂದ ನೋಟಕ್ಕೆ ಸಾಂಪ್ರದಾಯಿಕ ಪಟಾಕಿಗಳನ್ನು ಹೋಲುತ್ತವೆ. ಆದರೆ ಅವುಗಳನ್ನು ಸುಟ್ಟಾಗ ಮಾಲಿನ್ಯವು ತುಂಬಾ ಕಡಿಮೆ ಮತ್ತು ಸಾಮಾನ್ಯ ಪಟಾಕಿಗಳಿಗಿಂತ 40 ಸೆಂ.ಮೀ. 50% ಕಡಿಮೆ ಹಾನಿಕಾರಕ ಅನಿಲವನ್ನು ಹೊರಸೂಸುತ್ತವೆ.

ಹಸಿರು ಪಟಾಕಿಗಳು ವಾಯು ಮಾಲಿನ್ಯವನ್ನು ಉತ್ತೇಜಿಸುವ ಹಾನಿಕಾರಕ ರಾಸಾಯನಿಕಗಳನ್ನು ಹೊಂದಿರುವುದಿಲ್ಲ. ಇವುಗಳಲ್ಲಿ ಅಲ್ಯೂಮಿನಿಯಂ, ಬೇರಿಯಂ, ಪೊಟ್ಯಾಸಿಯಮ್ ನೈಟ್ರೇಟ್ ಮತ್ತು ಕಾರ್ಬನ್ ಬಳಸುವುದಿಲ್ಲ ಅಥವಾ ಹಸಿರು ಪಟಾಕಿಗಳಲ್ಲಿ ಅಪಾಯಕಾರಿ ರಾಸಾಯನಿಕಗಳ ಪ್ರಮಾಣವು ತುಂಬಾ ಕಡಿಮೆಯಾಗಿದೆ. ಇದರಿಂದಾಗಿ ಈ ಪಟಾಕಿಗಳಿಂದ ಮಾಲಿನ್ಯ ಕಡಿಮೆಯಾಗುತ್ತದೆ. ಪಟಾಕಿಗಳನ್ನು ಸುಡುವುದರಿಂದ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಮಾಲಿನ್ಯದಿಂದಾಗಿ, ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ ಮತ್ತು ಜನರು ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ.