ಕರ್ನಾಟಕದಲ್ಲಿ ಬಿಜೆಪಿಗೇ ಮತ್ತೆ ಗೆಲುವು - ಜೆ.ಪಿ.ನಡ್ಡಾ

ಕರ್ನಾಟಕದಲ್ಲಿ ಬಿಜೆಪಿಗೇ ಮತ್ತೆ ಗೆಲುವು - ಜೆ.ಪಿ.ನಡ್ಡಾ

ಬೆಂಗಳೂರು: 2014ರಲ್ಲಿ ಬಿಜೆಪಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಅಧಿಕಾರ ವಹಿಸಿಕೊಂಡಾಗ ಅದು ದೇಶದ ರಾಜಕೀಯ ಸಂಸ್ಕøತಿಯನ್ನೇ ಬದಲಿಸಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ತಿಳಿಸಿದರು.

ದಾವಣಗೆರೆಯಲ್ಲಿ ವೃತ್ತಿಪರರು ಮತ್ತು ಕೀ ಓಟರ್ಸ್ ಸಮಾವೇಶದಲ್ಲಿ ಮಾತನಾಡಿದರು. ಪಕ್ಷದ ಹಿರಿಯರಿಗೆ ಪುಷ್ಪಾರ್ಚನೆ ಮಾಡಿದ ಅವರು ಸಮಾವೇಶವನ್ನು ಉದ್ಘಾಟಿಸಿದರು. ಮತಬ್ಯಾಂಕ್ ರಾಜಕೀಯ, ಧರ್ಮ ಧರ್ಮಗಳ ನಡುವೆ, ಜಾತಿಗಳ ವೈಷಮ್ಯ, ಭ್ರಷ್ಟಾಚಾರ ದೇಶದಲ್ಲಿ ವ್ಯಾಪಕವಾಗಿತ್ತು. ನಾವಿಂದು ರಾಜಕೀಯದ ರಿಪೋರ್ಟ್ ಕಾರ್ಡ್ ಮುಂದಿಟ್ಟು ರಾಜ್ಯದಲ್ಲಿ ಮತ ಕೇಳಲಿದ್ದೇವೆ ಮತ್ತು ರಾಜ್ಯದಲ್ಲಿ ಗೆಲುವು ಪಡೆಯಲಿದ್ದೇವೆ ಎಂದು ತಿಳಿಸಿದರು.

ಕೋವಿಡ್ ದೇಶ ಮಾತ್ರವಲ್ಲ; ಜಗತ್ತಿನಾದ್ಯಂತ ಹಬ್ಬಿತ್ತು. ಅಮೆರಿಕವು ಎಲ್ಲರಿಗೂ ಕೋವಿಡ್ ಲಸಿಕೆ ಕೊಡಲು ಸಾಧ್ಯವಾಗಲಿಲ್ಲ. ಆದರೆ, ಭಾರತವು ಮೋದಿಜಿ ಅವರ ಸಕಾಲಿಕ ನಿರ್ಧಾರದಿಂದ ಕೋವಿಡ್‍ಮುಕ್ತ ದೇಶ ಮಾಡಲು ಸಾಧ್ಯವಾಯಿತು ಎಂದು ವಿವರಿಸಿದರು. ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಯನ್ನು ಗಮನಿಸಿ ಜನರು ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಬಿಜೆಪಿ ಇಂದು ಮೋದಿಜಿ ಅವರ ನೇತೃತ್ವದಲ್ಲಿ ಜಾಗತಿಕ ನಾಯಕನ ಸ್ಥಾನವನ್ನು ಪಡೆದಿದೆ ಎಂದು ವಿವರಿಸಿದರು.

ಗರೀಬ್ ಕಲ್ಯಾಣ್ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ. ಯಡಿಯೂರಪ್ಪ- ಬೊಮ್ಮಾಯಿಯವರ ನೇತೃತ್ವದ ಸರಕಾರಗಳೂ ಅನೇಕ ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ ಎಂದು ಅವರು ತಿಳಿಸಿದರು. ರಾಜ್ಯದ ಜನತೆಗೆ ಇವೆಲ್ಲವನ್ನೂ ಪಕ್ಷದ ಕಾರ್ಯಕರ್ತರು ತಿಳಿಸುವ ಮೂಲಕ ಚುನಾವಣೆಯಲ್ಲಿ ಪಕ್ಷವು ಅತಿ ಹೆಚ್ಚು ಸ್ಥಾನಗಳನ್ನು ಪಡೆಯುವಂತೆ ನೋಡಿಕೊಳ್ಳಲು ಸೂಚಿಸಿದರು.