ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೊಬ್ಬರಿ 1 ಕೋಟಿ ರೂ. ಹಣ ವಶಕ್ಕೆ
ಕಲಬುರಗಿ: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ10 ರಂದು ಮತದಾನ ನಡೆಯಲಿದೆ. ಇದೀಗ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಈಗಾಗಲೇ ಮೂರು ಪಕ್ಷದ ನಾಯಕರು ಪ್ರಚಾರದಲ್ಲಿ ಕೈಗೊಂಡಿದ್ದಾರೆ.
ಇದೀಗ ರಾಜ್ಯದಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.
ಕಲುಬುರಗಿ ಜಿಲ್ಲೆಯಲ್ಲಿ ಫರಹತಾಬಾದ್ ಚೆಕ್‌ಪೋಸ್ಟ್‌ನಲ್ಲಿ ಯಾವುದೇ ದಾಖಲೆಯಿಲ್ಲದೆ ಕಾರಿನಲ್ಲಿ ಬರೊಬ್ಬರಿ 1 ಕೋಟಿ ರೂ. ಹಣ ಪತ್ತೆಯಾಗಿದೆ. ಚೆಕ್ ಪೋಸ್ಟ್ ನಲ್ಲಿ ಕಾರು ತಪಾಸಣೆ ಮಾಡಿದಾಗ ಹಣವನ್ನು ಶವಕ್ಕೆ ಪಡೆದಿದ್ದಾರೆ. ರವಿ ಎಂಬಾತತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಪೊಲೀಸರು ಮತ್ತು ಅಧಿಕಾರಿಗಳು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಪೊಲೀಸ್ ಬಲೆಗೆ ಬಿದ್ದ ರವಿ, ತಾನು ಹತ್ತಿ ಮಿಲ್ ಮಾಲೀಕನಿದ್ದೇನೆ. ಕಾರ್ಮಿಕರ ವೇತನ ನೀಡಲು ಹಣ ತಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾನೆ. ಈ ಬಗ್ಗೆ ಇನ್ನು ಕೂಡ ಯಾವುದೇ ದೂರು ದಾಖಲಾಗಿಲ್ಲ.
ಎಸ್ ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರ; ಕೈ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಅಸಮಾಧಾನ
ತುಮಕೂರು: ಎಸ್ ಆರ್ ಶ್ರೀನಿವಾಸ್ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಆದ್ರೂ ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ, ಅಸಮಾಧಾನ ನಡೆಯುತ್ತಿದೆ. ಇದೀಗ ಮತ್ತೊಬ್ಬ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.ಶ್ರೀನಿವಾಸ್ ಕಾಂಗ್ರೆಸ್ ಬಂದಿರುವುದಕ್ಕೆ ಈಗಲೂ ವಿರೋಧ ಇದೆ. ಹೀಗಾಗಿ ನಮಗೆ ಮುಂದೆ ಟಿಕೆಟ್ ಕೊಡಿಸಿ ಗುಬ್ಬಿಯಲ್ಲಿ ಕಾಂಗ್ರೆಸ್ ಗೆಲ್ಲಿಸಲಿ ಎಂದು ಸವಾಲು ಹಾಕಿದ್ದಾರೆ. ಶ್ರೀನಿವಾಸ್ ಆಗಲಿ ಅಥವಾ ಕಾಂಗ್ರೆಸ್ ನಾಯಕರಾಗಲಿ ಯಾರು ಕೂಡ ನಮ್ಮನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿಲ್ಲ. ಶ್ರೀನಿವಾಸ್ ಪಕ್ಷಕ್ಕೆ ಬಂದಿರುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿ ತಿಳಿಯಿತು. ಸೇರ್ಪಡೆಗೂ ಕೂಡ ನಮನ್ನ ಆಹ್ವಾನಿಸಿಲ್ಲ ಎಂದರು.