ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣಾ ಪತ್ರ ನೀಡಲು ಅಗತ್ಯ ಕ್ರಮ - ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು: ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣ ಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಮುನಿರಾಜುಗೌಡ ಪಿ.ಎಂ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿಕ್ಕನಾಗವಲ್ಲಿ ಗ್ರಾಮದ ಸರ್ವೆ ನಂ.
ಈ ಸಂಬಂಧ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ. ಉತ್ತರ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಸವಲತ್ತುಗಳು ಬಾಕಿ ಇಟ್ಟು ಕೊಳ್ಳದೇ ಸಕಾಲದಲ್ಲಿ ಫಲಾನುಭವಿಗಳಿಗೆ ಸಿಗಬೇಕು. ಈ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.