ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಡವರಿಗೆ 20 ಲಕ್ಷ ಮನೆ ನಿರ್ಮಾಣ : ಸಿದ್ದರಾಮಯ್ಯ ಘೋಷಣೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಡವರಿಗೆ 20 ಲಕ್ಷ ಮನೆ ನಿರ್ಮಾಣ : ಸಿದ್ದರಾಮಯ್ಯ ಘೋಷಣೆ

ಮೈಸೂರು : ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 20 ಲಕ್ಷ ಮನೆ ಕಟ್ಟಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವರುಣಾ ಕ್ಷೇತ್ರ ವ್ಯಾಪ್ತಿಯ ಬಿಳುಗಲಿ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 20 ಲಕ್ಷ ಮನೆ ಕಟ್ಟಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕೊಟ್ಟ ಭರವಸೆ ಈಡೇರಿಸದಿದ್ದರೆ ಮತ್ತೆ ಅಧಿಕಾರದಲ್ಲಿ ಇರಲ್ಲ , ಬಡವರಿಗೆ ಬಿಜೆಪಿ ಒಂದು ಮನೆ ಕೂಡ ಕಟ್ಟಿಸಿ ಕೊಡಲಿಲ್ಲ. ಬೊಮ್ಮಾಯಿ ಧರ್ಮರಾಯನ ಥರ ಮಾತನಾಡುತ್ತಾರೆ. ಇಂಥವರಿಗೆ ಮತ್ತೆ ಮತ ಹಾಕಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

B.S ಯಡಿಯೂರಪ್ಪ ಮಗನ ಮನೆಯಲ್ಲೇ ಪೊಲೀಸ್ ನೇಮಕಾತಿ ನಡೆದಿದೆ, ಒಂದೊಂದು ಪೋಸ್ಟ್ ಗೆ 50 ರಿಂದ 80 ಲಕ್ಷ ವಸೂಲಿ ಮಾಡಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನೋಡಲೇ ಇಲ್ಲ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.ವರುಣಾ ಕ್ಷೇತ್ರ ವ್ಯಾಪ್ತಿಯ ಬಿಳುಗಲಿ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹೈಕಮಾಂಡ್ ಅಳೆದು ತೂಗಿ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸಿ ಎಂದು ಹೇಳಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕಮಾಂಡ್ ಅಳೆದು ತೂಗಿ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸಿ ಎಂದು ಹೇಳಿದ್ದಾರೆ , ಬಾದಾಮಿ ಕ್ಷೇತ್ರ ದೂರವಾಗಿದ್ದರಿಂದ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ, ನಾನು ರಾಜ್ಯ ಸುತ್ತಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ, ಬಿಜೆಪಿಯವರ ಮನೆ ಹಾಳಾಗ ಬಡವರಿಗೆ ಒಂದು ಮನೆ ಕೂಡ ಕೊಡಲಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಕಾಂಗ್ರೆಸ್ ತೊರೆದಿದ್ದ M.M ಹಿರೇಮಠ್ ಗೆ ಬಿಗ್ ಶಾಕ್ : 'SC' ಪ್ರಮಾಣಪತ್ರ ರದ್ದುಗೊಳಿಸಿ ಜಿಲ್ಲಾಡಳಿತ ಆದೇಶ

ಹಾವೇರಿ : ಎಸ್ ಸಿ ಜಾತಿ ( ಬೇಡ ಜಂಗಮ ) ಪ್ರಮಾಣ ಪತ್ರ ಪಡೆದಿದ್ದ ಎಂ, ಎಂ ಹಿರೇಮಠ್ ಗೆ ಜಿಲ್ಲಾಡಳಿತ ಶಾಕ್ ನೀಡಿದ್ದು, ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.ಹಾವೇರಿ ಎಸ್ ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ ಎಂ ಹಿರೇಮಠ್ ಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿಲ್ಲದ್ದರಿಂದ ತಮ್ಮ ಜಿಲ್ಲಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದರು. ಈ ಬೆನ್ನಲ್ಲೇ ಎಸ್ ಸಿ ಜಾತಿ ಪ್ರಮಾಣ ಪತ್ರ ಪಡೆದಿದ್ದ ಎಂ, ಎಂ ಹಿರೇಮಠ್ ಗೆ ಜಿಲ್ಲಾಡಳಿತ ಶಾಕ್ ನೀಡಿದ್ದು, ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ಜಾತಿ ಪ್ರಮಾಣ ಪತ್ರ ರದ್ದು ಮಾಡಿ ಹಾವೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಈ ಮೂಲಕ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದ ಹಿರೇಮಠ್ ಗೆ ಬಿಗ್ ಶಾಕ್ ತಗುಲಿದೆ. ಅಲ್ಲದೇ ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬೆಂಬಲಿಗರ ಜತೆ ಸಭೆ ನಡೆಸಿದ್ದರು.