ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾರನ್ನು ಭೇಟಿ ಮಾಡಲಿದ್ದಾರೆ ಮಮತಾ ಬ್ಯಾನರ್ಜಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾರನ್ನು ಭೇಟಿ ಮಾಡಲಿದ್ದಾರೆ ಮಮತಾ ಬ್ಯಾನರ್ಜಿ

ನವದೆಹಲಿ, ಜುಲೈ 15: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ25 ರಂದು ಮಮತಾ ಬ್ಯಾನರ್ಜಿ ದೆಹಲಿಗೆ ತೆರಳಲಿದ್ದಾರೆ, ಸೋನಿಯಾ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ನಾಲ್ಕು ದಿನ ಇರಲಿದ್ದು, ಈ ವೇಳೆ ಶರದ್ ಪವಾರ್, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರನ್ನು ಭೇಟಿಯಾಗಲಿದ್ದಾರೆ.

ಒಂದೆಡೆ ಪ್ರಶಾಂತ್ ಕಿಶೋರ್ ಶರದ್ ಪವಾರ್ ಜತೆ ಎರಡು ಸಭೆಗಳನ್ನು ನಡೆಸಿದ್ದರು, ಇನ್ನೊಂದೆಡೆ ಗಾಂಧಿ ಕುಟುಂಬದೊಂದಿಗೆ ಕೂಡ ಸಭೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಪಶ್ಚಿಮ ಬಂಗಾಳದಲ್ಲಿ ತೀವ್ರ ಹಣಾಹಣಿ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಜಯ ಸಾಧಿಸಿದ್ದಾರೆ. ಇದಿಗ 2024ರ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಇದೇ ಮೊದಲ ಬಾರಿಗೆ ಮಮತಾ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.