ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ : ಮಾಜಿ ಸಂಸದ ಧ್ರುವನಾರಾಯಣ್ ಪುತ್ರನಿಗೆ ನಂಜನಗೂಡು ಟಿಕೆಟ್

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ : ಮಾಜಿ ಸಂಸದ ಧ್ರುವನಾರಾಯಣ್ ಪುತ್ರನಿಗೆ ನಂಜನಗೂಡು ಟಿಕೆಟ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಎಐಸಿಸಿ ಇಂದು ಕಾಂಗ್ರೆಸ್ ನ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಧ್ರುವನಾರಾಯಣ್ ಪುತ್ರ ದರ್ಶನ್‍ಗೆ ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.

ಮೈಸೂರಿನ 11 ಕ್ಷೇತ್ರಗಳಲ್ಲಿ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್‍ಗೆ ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಮತ್ತು ಧ್ರುವನಾರಾಯಣ್ ನಡುವೆ ಫೈಟ್ ಸೃಷ್ಟಿಯಾಗಿತ್ತು. ಇದೀಗ ನಂಜನಗೂಡು ಕ್ಷೇತ್ರದಿಂದ ದಿ.ಧ್ರುವನಾರಾಯಣ ಪುತ್ರ ದರ್ಶನ್ ಗೆ ಟಿಕೆಟ್ ನೀಡಲಾಗಿದೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪರ್ಧಿಸಲಿದ್ದಾರೆ.