ಕಾಂಗ್ರೆಸ್ ಗೆ ಬಿಗ್ ಶಾಕ್: 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ: ಅಶೋಕ್ ಮಾಹಿತಿ
ಮಂಡ್ಯ: ಕಾಂಗ್ರೆಸ್ ಪಕ್ಷದ 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಸಚಿವ ಅಶೋಕ್, 10ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸಿದ್ದು, ಮುಖ್ಯಮಂತ್ರಿಗಳು ಮತ್ತು ನಾನು ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರೊಂದಿಗೆ ಮಂಗಳವಾರವಷ್ಟೇ ಮಾತುಕತೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿ ಆ ಪಕ್ಷದ ಮುಖಂಡರಿದ್ದಾರೆ. ಕಾಂಗ್ರೆಸ್ ಪಕ್ಷ 70 ಸ್ಥಾನ ಗೆಲ್ಲುವುದು ಕೂಡ ಕಷ್ಟ ಎಂದು ಹೇಳಿದ್ದಾರೆ.
123 ಸ್ಥಾನಗಳಿಸುವುದಾಗಿ ಹೇಳುತ್ತಿರುವ ಜೆಡಿಎಸ್ 13 ಸ್ಥಾನ ಗೆದ್ದರೆ ದೊಡ್ಡದು. ಬಿಜೆಪಿ 120ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಿ ಮತ್ತೆ ಸರ್ಕಾರ ರಚಿಸಲಿದೆ. ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಸೇರಲು ಆಹ್ವಾನಿಸಿದ್ದೇವೆ. ನಾನು ಕೂಡ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅಶೋಕ್ ತಿಳಿಸಿದ್ದಾರೆ.