ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸುವ ಮೂಲಕ ಕ್ಷೇತ್ರದ ಮಾಹಿತಿ ನೀಡಲು ಸಿದ್ಧರಾಮಯ್ಯಗೆ ಪರೋಕ್ಷ ಸಂದೇಶ ರವಾನಿಸಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಅವರು ಅರ್ಜಿ ಸಲ್ಲಿಸಿದ್ದಾರೆ.
ಖುದ್ದಾಗಿ ಅರ್ಜಿ ಸಲ್ಲಿಸುವ ಮೂಲಕ ಪಕ್ಷದ ಇತರೆ ನಾಯಕರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿ, ವರುಣಾ, ಚಾಮುಂಡೇಶ್ವರಿ, ಕೋಲಾರ ಸೇರಿದಂತೆ ಹಲವು ಕ್ಷೇತ್ರಗಳಿಂದ ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆನ್ನಲಾಗಿದೆ. ಕೋಲಾರದಿಂದ ಕಣಕ್ಕಿಳಿಯುವುದು ಖಚಿತವೆನ್ನಲಾಗಿದ್ದರೂ, ಅವರು ಯಾವ ಕ್ಷೇತ್ರದಿಂದಲೂ ಅರ್ಜಿ ಸಲ್ಲಿಸಿಲ್ಲ.
ಈಗ ಡಿ.ಕೆ. ಶಿವಕುಮಾರ್ ಕನಕಪುರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಖುದ್ದಾಗಿ ಅರ್ಜಿ ಸಲ್ಲಿಸುವ ಮೂಲಕ ಚುನಾವಣೆಗೆ ಸ್ಪರ್ಧಿಸುವ ನಾಯಕರು ಕ್ಷೇತ್ರಗಳ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸುವಂತೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.