ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ : ಕಂಪ್ಲಿ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ರಾಜು ನಾಯಕ್ ಕಣಕ್ಕೆ!
ಬೆಂಗಳೂರು : ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದ್ದು, ಕಂಪ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಜೆ.ಎನ್. ಗಣೇಶ್ ಗೆ ಟಿಕೆಟ್ ನಿಡಿದ್ದಕ್ಕೆ ರಾಜು ನಾಯಕ್ ಆಕ್ರೋಶ ಹೊರಹಾಗಿದ್ದು, ಇಂದು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಕಂಪ್ಲಿ ಕ್ಷೇತ್ರದಿಂದ ಜೆ.ಎನ್.ಗಣೇಶ್ ಗೆ ಟಿಕೆಟ್ ನೀಡಿದೆ. ಹೀಗಾಗಿ ಕಾಂಗ್ರೆಸ್ ನಾಯಕ ರಾಜು ನಾಯಕ್ ಬಂಡಾಯ ಎದ್ದಿದ್ದು, ಕಾಂಗ್ರೆಸ್ ಗೆ ರಾಜೀನಾಮೆ ನೀಡಿ, ಇಂದು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನಲ್ಲಿ ಇಂದು ರಾಜು ನಾಯಕ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಲಿದ್ದು, ಕಂಪ್ಲಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ.