ಕಾಂಗ್ರೆಸ್ ನಲ್ಲಿ `ಸಿಎಂ' ಹುದ್ದೆಗೆ ಬೇಡಿಕೆ ಇಟ್ಟ ಮತ್ತೊಂದು ಪ್ರಬಲ ಸಮುದಾಯ!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ಮತ್ತೊಂದು ಪ್ರಬಲ ಸಮುದಾಯ ಬೇಡಿಕೆ ಇಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ಗೆ ತಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಹೌದು, ಈಗಾಗಲೇ ಕಾಂಗ್ರೆಸ್ ನಲ್ಲಿ ಒಕ್ಕಲಿಗ ಸಮುದಾಯದಿಂದ ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದರೆ, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಹೇಳುತ್ತಿದ್ದಾರೆ. ಈ ನಡುವೆ ಮತ್ತೊಂದು ಸಮುದಾಯ ಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿದೆ.
ಚುನಾವಣೆ ಹೊತ್ತಲ್ಲೇ ಸಿಎಂ ಹುದ್ದೆ ರೇಸ್ ಗೆ ವೀರಶೈವ ಲಿಂಗಾಯತ ಸಮುದಾಯ ಎಂಟ್ರಿ ಕೊಟ್ಟಿದ್ದು, ನಿನ್ನೆ ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರ ಸಭೆ ನಡೆದಿದ್ದು, ಸಭೆಯಲ್ಲಿ ಲಿಂಗಾಯತ ಸಮುದಾಯದ ಸಿಎಂ ಕುರ್ಚಿಗಾಗಿ ಹೈಕಮಾಂಡ್ ಗೆ ಬೇಡಿಕೆ ಸಲ್ಲಿಸಲು ನಿರ್ಧರಿಸಲಾಗಿದೆ.
ವೀರೇಂದ್ರ ಪಾಟೀಲ್ ನಂತರ ಲಿಂಗಾಯತರಿಗೆ ಸಿಎಂ ಸ್ಥಾನ ಕೊಟ್ಟಿಲ್ಲ. ಹೀಗಾಗಿ ಈ ಬಾರಿ ಲಿಂಗಾಯತ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.