ಕಾಂಗ್ರೆಸ್ ನಿಂದ 3ನೇ ಗ್ಯಾರಂಟಿ ಘೋಷಣೆ: ಪ್ರತಿ ತಿಂಗಳು ಬಡ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತ

ಕಾಂಗ್ರೆಸ್ ನಿಂದ 3ನೇ ಗ್ಯಾರಂಟಿ ಘೋಷಣೆ: ಪ್ರತಿ ತಿಂಗಳು ಬಡ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತ

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರತಿ ಕುಟುಂಬದ ಸದಸ್ಯನಿಗೆ 2000 ಹಾಗೂ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತವಾಗಿ ತಮ್ಮ ಸರ್ಕಾರ ಬಂದರೇ ನೀಡುವುದಾಗಿ ಘೋಷಿಸಿತ್ತು. ಈ ಬಳಿಕ ಮೂರನೇ ಗ್ಯಾರಂಟಿಯಾಗಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.ಈ ಬಗ್ಗೆ ಇಂದು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಗ್ಯಾರಂಟಿ ಪೋಸ್ಟರ್ ಬಿಡುಗಡೆ ಮಾಡಿದರು.

ಕಾಂಗ್ರೆಸ್ ಮೂರನೇ ಗ್ಯಾರಂಟಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ನೀಡುವುದಾಗಿ ಉಚಿತವಾಗಿ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.