ಕಾಂಗ್ರೆಸ್ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲ್ಲ : ಶಾಸಕ ಅಭಯ್ ಪಾಟೀಲ್

ಬೆಳಗಾವಿ :ಕಾಂಗ್ರೆಸ್ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲ್ಲ ಎಂದು ಶಾಸಕ ಅಭಯ್ ಪಾಟೀಲ್ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಪಾಟೀಲ್ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲ್ಲ, ಸಿದ್ದರಾಮಯ್ಯ ಅವರಿಗೆ ಕ್ಷೇತ್ರವೇ ಸಿಗುತ್ತಿಲ್ಲ.
ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ತಾಳವಿಲ್ಲ ಮೇಳವಿಲ್ಲ. ಬೇರೆಯವರ ಬಗ್ಗೆ ಮಾತನಾಡಲು ಅವರಿಗೆ ನೈತಿಕ ಹಕ್ಕಿಲ್ಲ ಎಂದರು. ಹೈಕಮಾಂಡ್ ಖರ್ಗೆ ಅವರನ್ನು ಸಿಎಂ ಮಾಡಬೇಕು ಎಂದು ನಿರ್ಣಯ ಮಾಡಿದೆ. ಇದಕ್ಕಾಗಿ ಹೈಕಮಾಂಡ್ ಎಲ್ಲರನ್ನೂ ಬಿಟ್ಟು ಬೇರೆಯೇ ದಾರಿ ಹಿಡಿದಿದೆ ಎಂದು ಕಿಡಿಕಾರಿದರು.