ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೇ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ - ಡಿ.ಕೆ ಶಿವಕುಮಾರ್ ಘೋಷಣೆ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೇ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ - ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ( Karnataka Government Employees ) 7ನೇ ವೇತನ ಆಯೋಗ ( 7th Pay Commission ) ಜಾರಿ ಹಾಗೂ ಎನ್ ಪಿಎಸ್ ರದ್ದುಗೊಳಿಸಲು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮುಂಬರುವಂತ ಚುನಾವಣೆಯಲ್ಲಿ ಗೆದ್ದು ಬಹುಮತ ಪಡೆದು ಅಧಿಕಾರಕ್ಕೆ ಬಂದರೇ 7ನೇ ವೇತನ ಆಯೋಗ ಜಾರಿಗೊಳಿಸೋದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( DK Shivakumar ) ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಸರ್ಕಾರಿ‌ ನೌಕರರ ಹಿತರಕ್ಷಣೆ ಕಾಂಗ್ರೆಸ್ ಪಕ್ಷದ ಆದ್ಯತೆಯಾಗಿದೆ. 6ನೇ ವೇತನ ಆಯೋಗ ಜಾರಿ ಮಾಡಿದ್ದೂ ಕೂಡ ನಮ್ಮ ಸರ್ಕಾರ. 7ನೇ ವೇತನ ಆಯೋಗ ಜಾರಿ ಬಗ್ಗೆ ನಿಮಗಿರುವ ಆತಂಕ ನಮಗೆ ಅರ್ಥವಾಗುತ್ತದೆ. ನಿಮ್ಮ ಆತಂಕವನ್ನು ಪಕ್ಕಕ್ಕಿಡಿ. ಕಾಂಗ್ರೆಸ್ ಪಕ್ಷವು 7ನೇ ವೇತನ ಆಯೋಗ ಜಾರಿಗೆ ಕಟಿಬದ್ಧವಾಗಿದೆ ಎಂದು ತಿಳಿಸಿದ್ದಾರೆ.