ಕಾಂಗ್ರೆಸ್ ಬಸ್ ಯಾತ್ರೆ ಮಧ್ಯದಲ್ಲೇ ಪಂಕ್ಚರ್ ಆಗಲಿದೆ : ಮಾಜಿ ಸಿಎಂ

ಕಾಂಗ್ರೆಸ್ ಬಸ್ ಯಾತ್ರೆ ಮಧ್ಯದಲ್ಲೇ ಪಂಕ್ಚರ್ ಆಗಲಿದೆ : ಮಾಜಿ ಸಿಎಂ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಜನರಿಗೆ ಎಲ್ಲ ಸೌಲಭ್ಯಗಳು ಒದಗಿಸಿದೆ, ಹೀಗಾಗಿ ಬಿಜೆಪಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದನ್ನು ಯಾರೂ ತಡೆಯರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಹೇಳಿದ್ದಾರೆ.

ಬಿಜೆಪಿ ಕಾರ್ಯಾಕರಣಿ ಸಭೆಯಲ್ಲಿ ಮಾತಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ, ರಾಜ್ಯದ ಪ್ರತಿಯೊಂದು ಮನೆಗೆ ಸರ್ಕಾರದ ಸೌಲಭ್ಯ ಮತ್ತು ಕಾರ್ಯಕ್ರಮಗಳನ್ನು ತಲುಪಿಸಲಾಗಿದೆ.

ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ನ ಬಸ್ ಯಾತ್ರೆ ಮಧ್ಯದಲ್ಲಿ ಪಂಕ್ಚರ್ ಆಗುತ್ತದೆ. ಅದರಲ್ಲಿ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ದೊಡ್ಡ ಕೊಡುಗೆ ಕೊಡಲಾಗಿದೆ. ಈ ಚುನಾವಣೆಯಲ್ಲಿ 130-140 ಸ್ಥಾನ ಗೆಲ್ಲುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಯಾರಿಂದಲೂ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.