ಕಾಂಗ್ರೆಸ್ ಬಾಗಿಲು ತಟ್ಟಿದ ಬಿಜೆಪಿ ಎಂ.ಎಲ್.ಸಿ.

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಆಕಾಂಕ್ಷಿಗಳು ಟಿಕೆಟ್ಗಾಗಿ ಭರ್ಜರಿ ಲಾಬಿ ನಡೆಸಿದ್ದಾರೆ. ಇದರ ಮಧ್ಯೆ ಪಕ್ಷಾಂತರವೂ ನಡೆಯುತ್ತಿವೆ. ಇತ್ತೀಚೆಗೆ ಅಷ್ಟೇ ಬಿಜೆಪಿ ಸೇರ್ಪಡೆಯಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಪುಟ್ಟಣ್ಣ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾದ ಪುಟ್ಟಣ್ಣಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ.