ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೆ ಜೀವ ಬೆದರಿಕೆ ಆರೋಪ : ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮಂಗಳೂರು : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡಲಿ, ಅಂದೇ ಅವರ ಅಂತಿಮಯಾತ್ರೆ ಎಂದು ಸಕಲೇಶಪುರದ ಆರ್ ಎಸ್‌ಎಸ್ ನಾಯಕ ರಘು ಎಂಬ ವ್ಯಕ್ತಿ ಬೆದರಿಕೆ ಹಾಕಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಘಟನೆ ಸಂಬಂಧ ಶಾಸಕ ತನ್ವೀರ್ ಸೇಠ್ ಅವರು ಹಾಸನ ಜಿಲ್ಲೆಯ ಸಕಲೇಶಪುರದ ರಘು ವಿರುದ್ಧ ದೂರು ದಾಖಲಿಸಿದ್ದಾರೆ, ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪಿಸುವುದಾಗಿ ಈ ಹಿಂದೆ ತನ್ವೀರ್ ಸೇಠ್ ಹೇಳಿದ್ದರು. ಹೇಳಿಕೆ ಹಿಂಪಡೆದು ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದಲ್ಲದೇ ಒಂದೊಮ್ಮೆ ಹೇಳಿಕೆ ಹಿಂಪಡೆಯದಿದ್ದರೆ 6X3 ಅಡಿ ಫಿಕ್ಸ್ ಎಂದು ವಿಡಿಯೋ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹಿಂದೂ ಕಾರ್ಯಕರ್ತನಿಂದ ತಮಗೆ ಬೆದರಿಕೆ ಇದೆ ಎಂದು ಆರೋಪಿಸಿರುವ ತನ್ವೀರ್ ಸೇಠ್ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.