ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ; ಕಾರ್ಯಕರ್ತರಿಗೆ ಕರೆ ನೀಡಿದ BJP ರಾಜ್ಯಾಧ್ಯಕ್ಷ

ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ; ಕಾರ್ಯಕರ್ತರಿಗೆ ಕರೆ ನೀಡಿದ BJP ರಾಜ್ಯಾಧ್ಯಕ್ಷ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವನ್ನಾಗಿಸಬೇಕಿದೆ. ಹಾಗಾಗಿ ಮಾಜಿ ಸಚಿವರಾದ ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆ ತನ್ನಿ ಎಂದು ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

ಪುತ್ತೂರಿನ ಕಬಕದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಾಜ್ಯದಲ್ಲಿ ಕಾಂಗ್ರೆಸ್ ಸಧ್ಯದಲ್ಲಿಯೇ ನಶಿಸಿಹೋಗಲಿದೆ. ಬಿಜೆಪಿ ತತ್ವ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಯಾವತ್ತೂ ಸ್ವಾಗತವಿದೆ ಎಂದರು. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆತರುವ ಕೆಲಸ ಮಾಡಬೇಕು. ರಮಾನಾಥ್ ರೈ, ಖಾದರ್ ಅವರನ್ನು ಬಿಟ್ಟು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಬರುವಂತಾಗಬೇಕು. ಈ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಹೆಸರಿಲ್ಲದಂತೆ ಮಾಡಬೇಕಿದೆ ಎಂದರು.