ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ: ಸಚಿವ ಹಾಲಪ್ಪ ಆಚಾರ್

ಕುಷ್ಟಗಿ: ರಾಯಚೂರು ಜಿಲ್ಲೆಯಲ್ಲಿ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಕೊಪ್ಪಳ-ರಾಯಚೂರು ಜಿಲ್ಲೆಗಳ ಯಾವುದೇ ಪಂಚಾಯತಿಯಲ್ಲಿ ಶೇ.80ರಷ್ಟು ಸದಸ್ಯರು ನಮ್ಮ ಪಕ್ಷದ ಆಭ್ಯರ್ಥಿಯನ್ನು ಬೆಂಬಲಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಚುನಾವಣೆಯಲ್ಲಿ ನಮ್ಮ ಆಭ್ಯರ್ಥಿ ವಿಶ್ವನಾಥ ಬನಹಟ್ಟಿ ಗೆಲ್ಲುವುದು ಖಚಿತ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.