ಕಾಂಗ್ರೆಸ್ ಪ್ರತಿಭಟನೆ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಇಸ್ರೋ ಮುಖ್ಯಸ್ಥ ಕೆ.ಶಿವನ್

ಕಾಂಗ್ರೆಸ್ ಪ್ರತಿಭಟನೆ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಇಸ್ರೋ ಮುಖ್ಯಸ್ಥ ಕೆ.ಶಿವನ್

ಬೆಂಗಳೂರು: ಭಾರತೀಯ ಮಾನವ ಸಹಿತ ವೈಮಾನಿಕ ಯಾನ ಕಾರ್ಯಕ್ರಮವನ್ನು ಬೆಂಗಳೂರಿನಿಂದ ಗುಜರಾತ್‌ಗೆ ಸ್ಥಳಾಂತರಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯೋಜನೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆ ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಲು ಶಿವನ್ ಅವರು ನಿರಾಕರಿಸಿದ್ದಾರೆ.

ಈ ನಡುವೆ ಕಾಂಗ್ರೆಸ್ ನಾಯಕರು ಇಸ್ರೋ ಯೋಜನೆ ಕುರಿತು ವಿರೋಧ ವ್ಯಕ್ತಪಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

ಇಸ್ರೋ ಯೋಜನೆ ಕುರಿತು ಈಗಾಗಲೇ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು. ಬೊಮ್ಮಾಯಿ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ಸಂಸದರ ನಿಯೋಗವನ್ನು ಕೊಂಡೊಯ್ಯಬೇಕು ಮತ್ತು ಯೋಜನೆಯನ್ನು ರಾಜ್ಯದಲ್ಲಿ ಉಳಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇಸ್ರೋ ತನ್ನ ಯೋಜನೆ ಸ್ಥಳಾಂತರಿಸುವ ಪ್ರಸ್ತಾಪವನ್ನು ಕೂಡಲೇ ಕೈಬಿಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿಯೂ ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.