ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ: ನಾಳೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ
ಧಾರವಾಡ: ಈಗಾಗಲೇ ಅನೇಕ ಜೆಡಿಎಸ್ ಮುಖಂಡರು ಪಕ್ಷ ತೊರೆದು, ಬಿಜೆಪಿ, ಕಾಂಗ್ರೆಸ್ ( Congress Party ) ಸೇರಿದ್ದಾರೆ. ಇದೀಗ ಜೆಡಿಎಸ್ ನ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ಜೆಡಿಎಸ್ ಗೆ ( JDS Party ) ಗುಡ್ ಬೈ ಹೇಳಿ, ನಾಳೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದಾರೆ.
ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿಯವರು ಜೆಡಿಎಸ್ ತೊರೆಯಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಇದೀಗ ಆ ಮಾಹಿತಿ ಖಚಿತಗೊಂಡಿದ್ದು, ನಾಳೆ ಬೆಳಗಾವಿಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪ್ರಮುಖ ನಾಯಕರ ಸಮ್ಮುಖದಲ್ಲಿ ತೆನೆ ಬಿಟ್ಟು, ಕೈ ಹಿಡಿಯಲಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿರುವಂತ ಅವರು, ಕ್ಷೇತ್ರದ ಜನರಿಂದ ನಾನು ಕಾಂಗ್ರೆಸ್ ಸೇರುವ ಬಗ್ಗೆ ಒಕ್ಕೊರಲ ಒಮ್ಮತವಿದೆ. ಕ್ಷೇತ್ರದ ಜನತೆಯಂತೆ ನಾಳೆ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದಾಗಿ ತಿಳಿಸಿದ್ದಾರೆ.