ಕಾಂಗ್ರೆಸ್ ರೌಡಿಗಳ ಪಕ್ಷ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ರೌಡಿಗಳ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದವರು ಎಂದು ಕಾಂಗ್ರೆಸ್‌ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ನಮ್ಮದು ರೌಡಿಗಳ ಪಕ್ಷ ಅಲ್ಲ. ಕಾಂಗ್ರೆಸ್‌ನ ಯುವ ಮೋರ್ಚಾ ಅಧ್ಯಕ್ಷ ನಲಪಾಡ್ ಬಾರ್‌ನಲ್ಲಿ ಹೊಡೆದಾಡಿ ಜೈಲಿಗೆ ಹೋಗಿ ಬಂದವನು ಎಂದು ಕಾಂಗ್ರೆಸ್‌ಗೆ ಠಕ್ಕರ್ ನೀಡಿದ್ದಾರೆ. ಮಹಾರಾಷ್ಟ್ರ ಗಡಿ ವಿವಾದ ಬಗ್ಗೆ ಮಾತನಾಡಿ, ಕರ್ನಾಟಕದ ಒಂದಿಂಚು ಭೂಮಿ ಸಹ ಮಹಾರಾಷ್ಟ್ರಕ್ಕೆ ಹೋಗಲ್ಲ ಎಂದರು.