ಕಾಂತಾರ' ಮೆಚ್ಚಿಕೊಂಡ ಹೃತಿಕ್ ರೋಷನ್

ಅನೇಕ ಸೆಲೆಬ್ರಿಟಿಗಳು ‘ಕಾಂತಾರ’ ಸಿನಿಮಾವನ್ನು ಕೊಂಡಾಡಿದ್ದಾರೆ. ಅವರ ಸಾಲಿಗೆ ಹೃತಿಕ್ ರೋಷನ್ ಕೂಡ ಸೇರ್ಪಡೆ ಆಗಿದ್ದಾರೆ. ‘ಕಾಂತಾರ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್ನಲ್ಲಿ ಕಂಡ ಬದಲಾವನೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್ ರೋಷನ್ ಪೋಸ್ಟ್ ಮಾಡಿದ್ದಾರೆ.