ಕಾಡಾನೆ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚಿಸಿದ ಸರ್ಕಾರ

ಕಾಡಾನೆ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚಿಸಿದ ಸರ್ಕಾರ

ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ 4 ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಸರ್ಕಾರ ನಿರ್ಧರಿಸಿದೆ. CM ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು.