ಕಾನೂನು ಬಾಹಿರವಾಗಿ ಸಂಪಾದಿಸಿದ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುತ್ತದೆ: ಪ್ರವೀಣ್ ಸೂದ್

ಬೆಂಗಳೂರು: ಕಾನೂನು ಬಾಹಿರವಾಗಿ ಸಂಪಾದಿಸಿದ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುತ್ತದೆ ಎಂದು ಪೋಲಿಸ್ ಮಹಾನಿ ರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಮಾದಕವಸ್ತುಗಳ ಮಾರಾಟದ ಮೂಲಕ ಕಾನೂನುಬಾಹಿರವಾಗಿ ಗಳಿಸಿರುವ ಆಸ್ತಿಯನ್ನು ರಾಜ್ಯ ಪೋಲಿಸ್ ಇಲಾಖೆ ವಶಕ್ಕೆ ತೆಗೆದುಕೊಳ್ಳುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇದಕ್ಕಾಗಿ ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಇಲಾಖೆ ರೂ.7 ಕೋಟಿ ಹಣಕಾಸಿನ ನೆರವನ್ನು ಒದಗಿಸಿದೆ. ಇದಕ್ಕಾಗಿ ನಾನು ಕೇಂದ್ರದ ಸಂಬಂಧಪಟ್ಟ ಇಲಾಖೆ ಹಾಗೂ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ರಾಜ್ಯದಲ್ಲಿ ಮಾದಕವಸ್ತುಗಳ ವಿರುದ್ಧದ ನಮ್ಮ ಹೋರಾಟ ಹಾಗೂ ಮಾದಕವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಲು ನಮ್ಮ ಇಲಾಖೆ ಬದ್ಧವಾಗಿದೆ," ಎಂದು ತಮ್ಮ ಟ್ವೀಟ್‌ನಲ್ಲಿ ಸೂದ್ ಅವರು ತಿಳಿಸಿದ್ದಾರೆ..