ಕಾಯಕವೇ ಕೈಲಾಸ ಎಂದು ನಂಬಿದವನು ನಾನು; ಕುತೂಹಲ ಮೂಡಿಸಿದ ಜನಾರ್ಧನ ರೆಡ್ಡಿ ಸುದ್ದಿಗೋಷ್ಠಿ

ಬೆಂಗಳೂರು: ಕಾಯಕವೇ ಕೈಲಾಸ ಎಂದು ನಂಬಿದವನು ನಾನು ಬಳ್ಳಾರಿಯಲ್ಲಿ 5 ಸಾವಿರ ಜನರಿಗೆ ಉದ್ಯೋಗವನ್ನು ಕೊಟ್ಟಿದ್ದೇನೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.
ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ತಿಳಿಸಲು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ಹಣಕಾಸು ಸಂಸ್ಥೆ ಮಾಡಿದ್ದೆ.
ನಾನು ಶ್ರೀರಾಮುಲು ಚಿಕ್ಕ ವಯಸ್ಸಿನಿಂದಲೂ ಸ್ನೇಹಿತರು. ರಾಮುಲು ಸೋದರ ಮಾವನಿಗೆ ರಾಜಕಾರಣದ ಆಸೆ ಇತ್ತು. ಆದರೆ ಅವರ ಹತ್ಯೆಯಾಯಿತು. 1999ರಲ್ಲಿ ರಾಮುಲು ಬಿಜೆಪಿಯಿಂದ ಸ್ಪರ್ಧೆ ಮಾಡಿದರು ಎಂದು ತಿಳಿಸಿದರು.