ಕಾರವಾರದಲ್ಲಿ ಶಾಲಾ ಬಸ್ ಪಲ್ಟಿಯಾಗಿ ಮಹಿಳೆ ಸಾವು : ಚಾಲಕ ಸೇರಿ ಎಂಟು ಮಂದಿಗೆ ಗಂಭೀರ ಗಾಯ

ಕಾರವಾರ : ಶಾಲಾ ಬಸ್ ಪಲ್ಟಿಯಾಗಿ 60 ವರ್ಷದ ಮಹಿಳೆ ಮೃತಪಟ್ಟು, ಬಸ್ ಚಾಲಕ ಸೇರಿ ಎಂಟು ಮಂದಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಅರಬೈಲ್ ಘಟ್ಟದ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.