ಕಲ್ಯಾಣ ಕರ್ನಾಟಕದ 430 ಸೇರಿ 3,673 ಪೌರ ಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು : ರಾಜ್ಯ ಸರ್ಕಾರವು ಗುತ್ತಿಗೆ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದ್ದು, ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಅಧಿಸೂಚನೆ ಹೊರಡಿ ಸಲಾಗಿದ್ದು, ಒಟ್ಟು 3,673 ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಬಿಬಿಎಂಪಿಯ ವೆಬ್ ಸೈಟ್ ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ನೋಡಬಹುದು. ಜ.16ರಿ೦ದ 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜ.16ರ ಬೆಳಗ್ಗೆ 10ರಿಂದ ಅರ್ಜಿ ವಿತರಣೆ ಮಾಡಲಾಗುತ್ತದೆ. ಜನವರಿ 30 ಸಂಜೆ 5ರ ಒಳಗೆ ಭರ್ತಿ ಮಾಡಿದ ಅರ್ಜಿ ಹಾಗೂ ಸೂಚಿಸಿದ ದಾಖಲೆಗಳೊಂದಿಗೆ ಸಲ್ಲಿಸಿ ಸ್ವೀಕೃತಿ ಪಡೆಯಲು ಸೂಚಿಸಲಾಗಿದೆ.
ನೇಮಕಾತಿಗೆ ಅಧಿಸೂಚನೆ ಹೊರಡಿಸಲಾದ 3,673 ಹುದ್ದೆಗಳ ಪೈಕಿ 3,243 ಹುದ್ದೆಗಳನ್ನು ಸಾಮಾನ್ಯ ಹುದ್ದೆಗಳಾಗಿದ್ದು, ಉಳಿದ 430 ಗಳಿಗೆ ನೇಮಕಾತಿಗೆ ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿ ಮೀಸಲಿಡಲಾಗಿದೆ.
ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 10 ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ. ಪೌರಕಾರ್ಮಿಕರಿಗೆ 217 ಸಾವಿರದಿಂದ 228,950 ರವರೆಗೆ ವೇತನ ನಿಗದಿ ಪಡಿಸಲಾಗಿದೆ. ನೇಮಕಾತಿ ವಯೋಮಿತಿಯನ್ನು ಗುಷ್ಠ 35 ವರ್ಷಕ್ಕೆ ನಿಗದಿ ಪಡಿಸಲಾಗಿದೆ. ವಯಸ್ಸು ದೃಢಿಕರಣಕ್ಕೆ ಅರ್ಜಿ ಸಲ್ಲಿಸುವ ವೇಳೆ ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್, ಮತದಾರ ಗುರುತಿನ ಚೀಟಿ ಹಾಗೂ ಪಡಿತರ ಚೀಟಿಯ ದಾಖಲೆಗಳಲ್ಲಿ ಯಾವುದಾದರೂ ದಾಖಲೆ ಸಲ್ಲಿಸಬೇಕಿದೆ. ಕನಿಷ್ಠ 2 ವರ್ಷ ಗುತ್ತಿಗೆ ಆಧಾರದಡಿ ಕಾರ್ಯನಿರ್ವ ಹಿಸಿದ ಪೌರಕಾರ್ಮಿಕರು ಕಾಯಂಗೊಳಿಸುವ ನೇಮಕಾತಿ ವೇಳೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.