ಕಾಲೇಜಿನಲ್ಲಿ ‘ಬುರ್ಖಾ’ ಧರಿಸಿ ಡ್ಯಾನ್ಸ್ ಮಾಡಿದ್ದ ವಿದ್ಯಾರ್ಥಿಗಳು ಅಮಾನತು

ಮಂಗಳೂರು: ಕಾಲೇಜು ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಮಂಗಳೂರಿನ ಸೇಂಟ್ ಜೋಸೆಫ್ ಇಂಜಿನೀಯರಿಂಗ್ ಕಾಲೇಜಿನಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ವಿದ್ಯಾರ್ಥಿಗಳ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.