ಪಿಎಸ್‌ಐ ನೇಮಕಾತಿ ಅಕ್ರಮ: ಕಿಂಗ್ ಪಿನ್, ಮಧ್ಯವರ್ತಿಗಳ ಮನೆಯಲ್ಲಿ ತಡರಾತ್ರಿವರೆಗೆ ಇಡಿ ಶೋಧ

ಪಿಎಸ್‌ಐ ನೇಮಕಾತಿ ಅಕ್ರಮ: ಕಿಂಗ್ ಪಿನ್, ಮಧ್ಯವರ್ತಿಗಳ ಮನೆಯಲ್ಲಿ ತಡರಾತ್ರಿವರೆಗೆ ಇಡಿ ಶೋಧ

ಲಬುರ್ಗಿ: ನಿನ್ನೆ ಬೆಳಿಗ್ಗೆಯಿಂದ ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಸೇರಿದಂತೆ ಹಲವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ನಿನ್ನೆ ತಡರಾತ್ರಿಯವರೆಗೆ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಹಾಗೂ ಮಧ್ಯವರ್ತಿಗಳ ಮನೆಯಲ್ಲಿ ಇಡಿ ಅಧಿಕಾರಿಗಳು ಅಕ್ರಮದ ಬಗ್ಗೆ ದಾಖಲೆಗಳಿಗಾಗಿ ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದಂತ ಪಿಎಸ್‌ಐ ನೇಮಕಾತಿ ಅಕ್ರಮದ ಆರೋಪಿಗಳಿಗೆ ಇಡಿ ಅಧಿಕಾರಿಗಳು ಅವರ ನಿವಾಸದ ಮೇಲೆ ದಾಳಿ ನಡೆಸಿ, ನಿನ್ನೆ ಶಾಕ್ ನೀಡಿದ್ದರು. ಐವರು ಆರೋಪಿಗಳ ಮನೆಗಳಲ್ಲಿ ತಡರಾತ್ರಿ ಶೋಧ ನಡೆಸಿದ್ದಾರೆ ಎನ್ನಲಾಗಿದೆ.

ಪಿಎಸ್‌ಐ ನೇಮಕಾತಿ ಅಕ್ರಮ ಕಿಂಗ್ ಪಿನ್ ರುದ್ರಗೌಡ ಪಾಟೀಲ್, ಆತನ ಸಹೋದರ ಮಹಾಂತೇಶ್ ಪಾಟೀಲ್, ಕಾಶಿನಾಚ್ ಚಿಲಕುಂದ್ರಿ ಹಾಗೂ ಮಂಜುನಾಥ್ ಮೇಳಕುಂದ್ರಿ ನಿವಾಸದಲ್ಲಿ ಅಕ್ರಮದ ಬಗ್ಗೆ ತಡರಾತ್ರಿಯವರೆಗೆ ಶೋಧಕಾರ್ಯ ನಡೆಸಿದ್ದಾರೆ.

ಈಗಾಗಲೇ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಅಕ್ರಮವಾಗಿ ಹಣ ವರ್ಗಾವಣೆ ಬಗ್ಗೆ ಮಹತ್ವದ ಮಾಹಿತಿಯನ್ನು ಇಡಿ ಅಧಿಕಾರಿಗಳು ಕಲೆ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೇ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.