ಕಿಮ್ಸ್'ಗೆ ಶಾಸಕಿ ಕುಸುಮಾವತಿ ಭೇಟಿ ರೋಗಿಗಳ ಆರೋಗ್ಯ ವಿಚಾರಣೆ
ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ ದಿಡೀರ್ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆ ಪರಿಶೀಲನೆ ನಡೆಸಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸಲಹೆ ನೀಡಿದ್ದಾರೆ.
ಕುಂದಗೋಳ ಮತಕ್ಷೇತ್ರ ಸೇರಿದಂತೆ ವಿವಿಧೆಡೆಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಆಗಮಿಸಿದ ರೋಗಿಗಳ ಆರೋಗ್ಯ ವಿಚಾರಿಸಿದ ಶಾಸಕಿ ಕುಸುಮಾವತಿ ಶಿವಳ್ಳಿ ಅಗತ್ಯ ವೈದ್ಯಕೀಯ ಸೇವೆ ಕಲ್ಪಿಸುವಂತೆ ಕಿಮ್ಸ್ ವೈದ್ಯಾಧಿಕಾರಿಗಳಿಗೆ ತಿಳಿಸಿ, ಬಳಿಕ ರೋಗಿಗಳ ಯೋಗಕ್ಷೇಮ ವಿಚಾರಣೆ ನಡೆಸಿದ್ದಾರೆ.
ಈ ವೇಳೆ ರೋಗಿಗಳು ತಮ್ಮ ತಮ್ಮ ಅಳಲನ್ನು ಶಾಸಕರು ಬಳಿ ತೋಡಿಕೊಂಡಿದ್ದು, ಶಾಸಕಿ ಕುಸುಮಾವತಿ ಶಿವಳ್ಳಿ ತಮ್ಮ ಕೈಲಾದ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.