ಕಿಯಾ ಇಂಡಿಯಾ'ದ ಇನ್‌ಸ್ಟಾಗ್ರಾಮ್ ಖಾತೆ ಹ್ಯಾಕ್
ಕಿಯಾ ಇಂಡಿಯಾ ದ ಇನ್‌ಸ್ಟಾಗ್ರಾಮ್ ಖಾತೆಯು ಮಂಗಳವಾರ ಹ್ಯಾಕರ್‌ಗಳಿಗೆ ಬಲಿಯಾಗಿದೆ ಎಂದು ಕಂಪನಿ ದೃಢಪಡಿಸಿದೆ. ಇಂದು ನಸುಕಿನಲ್ಲಿ ಅಪರಿಚಿತ ಹ್ಯಾಕರ್‌ಗಳು ಕಂಪನಿಯ ಇನ್‌ಸ್ಟಾಗ್ರಾಮ್ ಪ್ರೊಫೈಲ್ ಅನ್ನು ಸ್ವಾಧೀನಪಡಿಸಿಕೊಂಡರು. ಅದನ್ನು ಶೀಘ್ರವಾಗಿ ಮರುಸ್ಥಾಪಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ದಕ್ಷಿಣ ಕೊರಿಯಾದ ಕಾರು ತಯಾರಕರ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇಂತಹ ಘಟನೆ ಸಂಭವಿಸಿರುವುದು ಇದೇ ಮೊದಲಲ್ಲ. ಫೆಬ್ರವರಿ 2022 ರಲ್ಲೂ ಇದೇ ಪರಿಸ್ಥಿತಿ ಎದುರಾಗಿತ್ತು.