ಕಿಸಾನ್ ಸಮ್ಮಾನ್' ಯೋಜನೆ ಹಣ ಬಿಡುಗಡೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕಿಸಾನ್ ಸಮ್ಮಾನ್' ಯೋಜನೆ ಹಣ ಬಿಡುಗಡೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ರೈತರಿಗೆ ನೆರವಾಗಲು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಅನ್ವಯ ಪ್ರತಿಯೊಬ್ಬರ ಖಾತೆಗೂ ನೇರವಾಗಿ ಹಣ ಪಾವತಿಸಲಾಗುತ್ತದೆ.

ಇದೀಗ ಕೇಂದ್ರ ಸರ್ಕಾರ 13ನೇ ಕಂತಿನ ಹಣವನ್ನು ಪಾವತಿಸಬೇಕಾಗಿದ್ದು, ಇದರ ಕುರಿತಂತೆ ಕೃಷಿ ಸಚಿವ ಬಿಸಿ ಪಾಟೀಲ್ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಹತ್ವದ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ವಿಮಾನ ನಿಲ್ದಾಣದ ಉದ್ಘಾಟನೆಗಾಗಿ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲಿಯೇ 13ನೇ ಕಂತನ್ನು ಬಿಡುಗಡೆ ಮಾಡಲಿದ್ದು, 53 ಲಕ್ಷ ರೈತರ ಖಾತೆಗಳಿಗೆ ಜಮೆಯಾಗಲಿದೆ ಎಂದು ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.