ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಿದ್ದಾರೆ ಮೋದಿ : ಸಚಿವೆ ಶೋಭಾ ಕರಂದ್ಲಾಜೆ

ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಿದ್ದಾರೆ ಮೋದಿ : ಸಚಿವೆ ಶೋಭಾ ಕರಂದ್ಲಾಜೆ

ಹೊಸದಿಗಂತ ವರದಿ ಬೆಳಗಾವಿ :

ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಗಳು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಗುರುವಾರ ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು ಎಂದು ತಿಳಿಸಿದರು.

ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ್ ಘಾಳಿ ಮತ್ತಿತರರು ಉಪಸ್ಥಿತರಿದ್ದರು.