ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಇಂದು ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಇಂದು ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಬೆಂಗಳೂರು : ಮಂಗಳೂರು ಸ್ಪೋಟ ಪ್ರಕರಣದ ಬೆನ್ನಲ್ಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ( ನ.23) ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ, ಈ ವೇಳೆ ಸಚಿವರು, ಬಾಂಬ್ ಸ್ಪೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕ ಪುರುಷೋತ್ತಮ್ ನ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಲಿದ್ದಾರೆ.

ಘಟನೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ' ಆಟೋ ರಿಕ್ಷಾ ಬಾಂಬ್ ಸ್ಪೋಟ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಭಯೋತ್ಪಾದನಾ ಕೃತ್ಯವನ್ನು ಮಟ್ಟ ಹಾಕಲು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.