ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ಡಿಕೆಶಿ ಹೇಳಿಕೆ : 'ಕೈ' ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು..?
ಕೊಪ್ಪಳ : ಕಾಂಗ್ರೆಸ್ ಯಾವುದೇ ಸಮುದಾಯವನ್ನು ಓಲೈಸಲು ಪ್ರಯತ್ನಿಸುತ್ತಿಲ್ಲ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಶಾಸಕಿ ಮಂಗಳೂರು ಸ್ಪೋಟ ಪ್ರಕರಣದ ಕುರಿತು ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಉಲ್ಲೇಖಿಸಿ ಡಿಕೆ ಶಿವಕುಮಾರ ಆಗಲೀ ಅಥವಾ ಪಕ್ಷದ ಬೇರೆ ನಾಯಕರಾಗಲೀ ಯಾವುದೇ ಸಮುದಾಯಯವನ್ನು ಓಲೈಸಲು ಪ್ರಯತ್ನಿಸುತ್ತಿಲ್ಲ ಎಂದು ಹೇಳಿದರು. ನಮ್ಮ ಪಕ್ಷ ಬಸವಣ್ಣ ಮತ್ತು ಅಂಬೇಡ್ಕರ್ ತತ್ವಗಳ ಪಾಲನೆ ಮಾಡಿಕೊಂಡು ಬಂದಿದೆ ಎಂದು ಪ್ರತಿಕ್ರಿಯೆ ನೀಡಿದರು.